ಎಂಡೋಸಲ್ಫಾನ್ ನಿಷೇಧಕ್ಕೆ ಬದ್ಧ: ಸಿಎಂ

 

ಗುಲ್ಬರ್ಗ: ರಾಸಾಯನಿಕ ಕೀಟನಾಶಕ ಎಂಡೋಸಲ್ಫಾನ್ ಸೃಷ್ಟಿಸಿರುವ ಅವಾಂತರಗಳನ್ನು ಖುದ್ದಾಗಿ ತಾವು ನೋಡಿದ್ದು, ಎಂಡೋಸಲ್ಫಾನ್ ಅನ್ನು ನಿಷೇಧಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.
ಇಲ್ಲಿನ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಳೆದ ವರ್ಷ ನಾನು ಎಂಡೋಸಲ್ಫಾನ್‌ನಿಂದ ಬಾಧಿತವಾದ ಪ್ರದೇಶಕ್ಕೆ ಭೇಟಿ ನೀಡಿದ್ದು, ಅಲ್ಲಿನ ಜನರ ನೋವು ಆಲಿಸಿದ್ದೇನೆ. ಈ ಕೀಟನಾಶಕ ನಿಷೇಧಿಸುವ ಎಲ್ಲ ಪ್ರಯತ್ನಗಳನ್ನೂ ನಮ್ಮ ಸರ್ಕಾರ ಮಾಡಲಿದೆ’ ಎಂದು ಅವರು ಸ್ಪಷ್ಟಪಡಿಸಿದರು.